Breaking News

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್

Written by 
Published: 05 May 2017
1186 times Last modified on Friday, 05 May 2017 11:02

ಕೆ.ಎನ್.ಪಿ.ವಾರ್ತೆ,ಸೌಂದರ್ಯ;

ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟದ ಕೆಲಸ.

ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು. ಆರಂಭದಲ್ಲಿಯೇ ಇದರ ಕುರಿತಾಗಿ ಕಾಳಜಿ ತೆಗೆದುಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ಅವು ಮುಖದ ಮೇಲೆ ಶಾಶ್ವತ ಕಲೆಗಳಾಗಿ ಉಳಿದುಬಿಡಬಹುದು. ಆದ್ದರಿಂದ ಬೇಸಿಗೆಯಲ್ಲಿ ಮುಖದ ಆರೋಗ್ಯ ಕಾಪಾಡಿಕೊಂಡು, ಸೌಂದರ್ಯ ಹೆಚ್ಚಿಕೊಳ್ಳಲು ಕೆಲವು ಸರಳ ಉಪಾಯಗಳು ಇಲ್ಲಿವೆ.

ಟೊಮೆಟೊ ಹಣ್ಣಿನ ರಸವನ್ನು ಮುಖದ ಮೇಲೆ ಚೆನ್ನಾಗಿ ಹಚ್ಚಿಕೊಂಡು ಮಸಾಜು ಮಾಡಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ಸೌತೆಕಾಯಿಯ ಸ್ಲೈಸ್ ಗಳನ್ನು ಮಾಡಿಕೊಂಡು ಅದನ್ನು ನಿಧಾನವಾಗಿ ಮುಖದ ಮೇಲೆ ಉಜ್ಜಿಕೊಳ್ಳುವುದರಿಂದ ಮುಖದ ಚರ್ಮದಲ್ಲಿ ತೇವಾಂಶ ಹೆಚ್ಚುತ್ತದೆ. ಅಲ್ಲದೇ ಸ್ಲೈಸ್ ಗಳನ್ನು ಕಣ್ಣುಗಳ ಮೇಲೆ ಇಟ್ಟುಕೊಳ್ಳುವುದರಿಂದ ಕಣ್ಣಿನ ಉರಿ ಕಡಿಮೆಯಾಗುತ್ತದೆ.

ರೋಸ್ ವಾಟರ್ ಅನ್ನು ಮುಖಕ್ಕೆ ಬಳಸುವುದರಿಂದ ಕಪ್ಪು ಚುಕ್ಕೆಗಳು ಕಡಿಮೆಯಾಗುತ್ತವೆ.

ಹಾಲಿನ ಕೆನೆಯನ್ನು ಅರಿಸಿನ ಪುಡಿಯೊಂದಿಗೆ ಕಲಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಕಪ್ಪು ಚುಕ್ಕೆಗಳನ್ನು ತಡೆಗಟ್ಟಬಹುದು ಹಾಗೂ ಕಣ್ಣಿನ ಸುತ್ತಲಿನ ಕಪ್ಪು ಉಂಗುರವನ್ನು ಕಡಿಮೆ ಮಾಡಿಕೊಳ್ಳಬಹುದು.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿಕೊಳ್ಳಬೇಕು. ನಂತರ ಆ ಕಿತ್ತಳೆ ಪೌಡರನ್ನು ನೀರಿನೊಂದಿಗೆ ಕಲಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ಲಿಂಬೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಮೇಲಿನ ಬೆವರು ಗುಳ್ಳೆಗಳು ಕಡಿಮೆಯಾಗುತ್ತವೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250353
Today
Yesterday
This Week
Last Week
This Month
Last Month
All days
9760
16742
76081
4062809
281448
395132
4250353
Your IP: 54.234.190.237
2018-01-18 15:51