Breaking News

ಶಾ ಸೂಚನೆ ಮೀರಿ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿದ ಬಿಎಸ್ ವೈ

Written by 
Published: 05 January 2018
39 times Last modified on Friday, 05 January 2018 10:25

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜ.05;

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯನ್ನು ಮೀರಿ, ಪರಿವರ್ತನಾ ರ್ಯಾಲಿ ವೇಳೆ ಬಿ.ಎಸ್.ಯಡಿಯೂರಪ್ಪ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯನ್ನು ಮತ್ತೆ ಘೋಷಣೆ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ನಿನ್ನೆ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆದಿದ್ದು, ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ನೇಮಿರಾಜ ನಾಯ್ಕ್ 2018ರ ಚುನಾವಣೆ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಕಳೆದ ಭಾನುವಾರ ಬೆಂಗಳೂರಿಗೆ ಭೇಟಿ ನೀಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು, ಯಾವುದೇ ಕಾರಣಕ್ಕೂ ವರಿಷ್ಠರು ತೀರ್ಮಾನಿಸುವವರೆಗೂ ಅಭ್ಯರ್ಥಿಗಳ ಹೆಸರನ್ನು ಘೋಷಿಸದಂತೆ ಯಡಿಯೂರಪ್ಪ ಸೇರಿದಂತೆ ಎಲ್ಲರಿಗೂ ಸೂಚಿಸಿದ್ದರು. ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್‍ಗೆ ಬಿಟ್ಟಿದ್ದು, ನೀವು ಕೇವಲ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಹರಿಸಬೇಕು. ಉಳಿದ ಎಲ್ಲಾ ಸಂಗತಿಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಸೂಚಿಸಿದ್ದರು. ಆದರೆ, ಯಡಿಯೂರಪ್ಪ ಈ ಸೂಚನೆ ಮೀರಿ ಅಭ್ಯರ್ಥಿ ಘೋಷಣೆ ಮಾಡಿದ್ದು ರಾಜ್ಯ ನಾಯಕರು ಹಾಗೂ ಟಿಕೆಟ್ ಆಕಾಂಕ್ಷಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಹಗರಿಬೊಮ್ಮನಹಳ್ಳಿ ಕ್ಷೇತ್ರ ಸದ್ಯ ಜೆಡಿಎಸ್ ವಶದಲ್ಲಿದೆ. ಕಳೆದ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ನೇಮಿರಾಜ ನಾಯಕ್ 51,847 ಮತಗಳನ್ನು ಪಡೆದು ಸೋತಿದ್ದರು. ಜೆಡಿಎಸ್‌ನಿಂದ ಭೀಮಾ ನಾಯಕ್ 51,972 ಮತಗಳನ್ನು ಪಡೆದು ಗೆದಿದ್ದರು. ಜೆಡಿಎಸ್‌ ಪಕ್ಷದಿಂದ ಅಮಾನತುಗೊಂಡಿರುವ ಭೀಮಾ ನಾಯಕ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯವು ಸಾಧ್ಯತೆ ಇದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250347
Today
Yesterday
This Week
Last Week
This Month
Last Month
All days
9754
16742
76075
4062809
281442
395132
4250347
Your IP: 54.234.190.237
2018-01-18 15:50