Breaking News

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ : ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮಾಚರಣೆ

Written by 
Published: 12 December 2017
29 times Last modified on Tuesday, 12 December 2017 12:11

ಕೆ.ಎನ್.ಪಿ.ವಾರ್ತೆ,ಬೆಂಗಳೂರು, ಡಿ.12;

ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಆಯ್ಕೆಯಾಗಿದ್ದನ್ನು ಸ್ವಾಗತಿಸಿ ಕೆಪಿಸಿಸಿ ಕಚೇರಿಯಲ್ಲಿಂದು ಸಿಹಿ ಹಂಚಿ, ಸಂಭ್ರಮಿಸಲಾಯಿತು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತಿತರ ಮುಖಂಡರು ಕೆಪಿಸಿಸಿ ಕಚೇರಿ ಮುಂದೆ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಪರಮೇಶ್ವರ್ ಮಾತನಾಡಿ, ರಾಹುಲ್‍ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಇನ್ನಷ್ಟು ಬಲಗೊಳ್ಳಲಿದೆ. ಗುಜರಾತ್ ಮತ್ತು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರ ನೇತೃತ್ವದಲ್ಲಿ ಬೆಂಗಳೂರು ಅಥವಾ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸ್ಥಳ ಮತ್ತು ದಿನಾಂಕದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಇದೇ ಡಿಸೆಂಬರ್ 16ರಂದು ಹಾಲಿ ಅಧ್ಯಕ್ಷೆ ಸೋನಿಯಾಗಾಂಧಿ ತಮ್ಮ ಪುತ್ರನಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. 

ನಿನ್ನೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274366
Today
Yesterday
This Week
Last Week
This Month
Last Month
All days
801
15484
100094
4062809
305461
395132
4274366
Your IP: 54.167.126.106
2018-01-20 01:17