Breaking News

ಅಕ್ರಮ ಮರಳುಗಾರಿಕೆ ದಂಧೆಯನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಪ್ರತಿಭಟನೆ

Written by 
Published: 01 December 2017
36 times Last modified on Friday, 01 December 2017 08:27

ಕೆ.ಎನ್.ಪಿ.ವಾರ್ತೆ,ಜಗಳೂರು,ಡಿ.01;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಅಕ್ರಮ ಮರಳುಗಾರಿಕೆ ದಂಧೆಯನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಜಗಳೂರು ತಾಲ್ಲೂಕಿನ ಗೌರಿಪುರ ಮತ್ತು ಗಡಿಮಾಕುಂಟೆಯ ಗ್ರಾಮಗಳಲ್ಲಿ ಸುಮಾರು ವರ್ಷಗಳಿಂದ ಅಕ್ರಮ ಮರಳುಗಾರಿಕೆ ದಂಧೆಯನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಈ ವೇಳೆ ಪಟ್ಟಣದ ತಾಲೂಕು ಕಛೇರಿ ಎದುರು ಪ್ರತಿಭಟಿಸಿ ಗ್ರೇಡ್ 2 ತಹಶಿಲ್ದಾರ್ ದಿವಾಕರ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗೌರಿಪುರ ಮೈಲೇಶ್ ಅವರು, ಗ್ರಾಮಗಳಲ್ಲಿ ರಾತ್ರೋರಾತ್ರಿ ಅಕ್ರಮವಾಗಿ ಸುಮಾರು 20-30 ಟ್ರ್ಯಾಕ್ಟರ್ ಗಳಲ್ಲಿ ಮರಳು ಸಾಗಾಟ ಮಾಡುತ್ತಿದ್ದಾರೆ. ಇದರಿಂದ ಅಂತರ್ಜಲ ಕುಸಿಯುತ್ತದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಸಹ ಯಾರೊಬ್ಬ ಅಧಿಕಾರಿಗಳು ಬಾರದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವಕೀಲರಾದ ಆರ್. ಓಬಳೆಶ್, ದಿದಗ್ಗಿ ವಿಜಯ್, ಗ್ರಾಮಸ್ಥರಾದ ರಾಮಕೃಷ್ಣ, ಬಿ. ಶಿವಪ್ಪ ,ನಾಗರಜ್ ಎನ್ ,ಟಿ.ಪಿ. ಮಂಜುನಾಥ್, ನಾಗರಾಜ್, ಹೆಚ್.ಬಿ.ಬಸವರಾಜ್, ಸೇರಿದಂತೆ ಅನೇಕ ಗ್ರಾಮಸ್ಥರು ಹಾಜರಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3770813
Today
Yesterday
This Week
Last Week
This Month
Last Month
All days
5985
14978
20963
3647859
197040
189062
3770813
Your IP: 54.221.76.68
2017-12-18 08:51