Breaking News

ಬಾರ್ ಅಗ್ನಿ ದುರಂತ : ಮೃತರ ಕುಟುಂಬಕ್ಕೆ 5ಲಕ್ಷ ಪರಿಹಾರ

Written by 
Published: 08 January 2018
28 times Last modified on Monday, 08 January 2018 09:34

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.08;

ಬಾರ್ ಅಗ್ನಿ ದುರಂತದಲ್ಲಿ ಸಜೀವ ದಹನಗೊಂಡ ಮೃತರ ಕುಟುಂಬಕ್ಕೆ 5ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ.

ನಗರದ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿನ ಕೈಲಾಶ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಇಂದು ಮುಂಜಾನೆ ಅಗ್ನಿ ದುರಂತ ಸಂಭವಿಸಿ ಬಾರ್ ನಲ್ಲಿದ್ದ ಐವರು ಸಿಬ್ಬಂದಿಗಳು ಸಜೀವ ದಹನಗೊಂಡಿದ್ದು, ಮೃತ ಕುಟುಂಬಗಳಿಗೆ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ಮುಂಜಾನೆ 2.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟಿನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು, ಧಾರುಣವಾಗಿ ಮೃತಪಟ್ಟ ತುಮಕೂರಿನ ಸ್ವಾಮಿ (23), ಪ್ರಸಾದ್ (20), ಹಾಸನದ ಮಂಜುನಾಥ್ (45), ಮಂಡ್ಯದ ಕೀರ್ತಿ (24) ಹಾಗೂ ಮಹೇಶ್ (35) ಇವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುವುದು. ಈ ಘಟನೆ ನಡೆದಿರುವುದು ಅತ್ಯಂತ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.  ಮುಂದೆ ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು. ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಬಾರ್‍ನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿತ್ತೆ ಇಲ್ಲವೇ, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಯೇ ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಗೊತ್ತಾಗಲಿದೆ. ಇದು ತುಂಬ ಹಳೆಯ ಕಟ್ಟಡವಾಗಿರುವುದರಿಂದ ಒಂದೇ ಬಾಗಿಲು ಇರುವ ಕಾರಣ ಘಟನೆ ನಡೆದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದರು. ಇಂತಹ ಕಟ್ಟಡಗಳಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಲೈಸೆನ್ಸ್ ನವೀಕರಣ ಮಾಡುವ ವೇಳೆ ನಿಯಮಗಳನ್ನು ಪಾಲನೆ ಮಾಡುವುದಾಗಿ ಮಾಲೀಕರು ಹೇಳಿದ್ದರು. ಬಾರ್‍ನಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬುದರ ಬಗ್ಗೆ ತನಿಖೆಯ ನಂತರವೇ ತಿಳಿಯಲಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಜರುಗಿಸುವುದಾಗಿ ಸಚಿವ ಜಾರ್ಜ್ ಹೇಳಿದರು. 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250558
Today
Yesterday
This Week
Last Week
This Month
Last Month
All days
9965
16742
76286
4062809
281653
395132
4250558
Your IP: 54.234.190.237
2018-01-18 16:02