Breaking News

ಬಾರ್ ನಲ್ಲಿ ಅಗ್ನಿ ದುರಂತ : ಐವರು ಸಜೀವ ದಹನ

Written by 
Published: 08 January 2018
33 times Last modified on Monday, 08 January 2018 08:58

ಕೆ,ಎನ್.ಪಿ.ವಾರ್ತೆ,ಬೆಂಗಳೂರು,ಜ.08;

ನಗರದ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿನ ಕೈಲಾಶ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಬೆಂಕಿ ದುರಂತ ಸಂಭವಿಸಿ ಐವರು ಸಜೀವ ದಹನವಾಗಿದ್ದಾರೆ.

ಇಂದು ಮುಂಜಾನೆ 2.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟಿನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು, ತುಮಕೂರಿನ ಸ್ವಾಮಿ (23), ಪ್ರಸಾದ್ (20), ಹಾಸನದ ಮಂಜುನಾಥ್ (45), ಮಂಡ್ಯದ ಕೀರ್ತಿ (24) ಹಾಗೂ ಮಹೇಶ್ (35) ಎಂದು ಗುರುತಿಸಲಾಗಿದೆ. ಮೃತರು ಕೈಲಾಶ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿ ಮಲಗಿದ್ದಾಗ ಈ ದುರಂತ ಸಂಭವಿಸಿದೆ ಎಂದು ಮಾಹಿತಿಗಳಿಂದ ತಿಳಿದುಬಂದಿದೆ.

ಮಾರುಕಟ್ಟೆಗೆ ತೆರಳುತ್ತಿದ್ದ ಸಾರ್ವಜನಿಕರು ಬಾರ್ ಇರುವ ಕಟ್ಟಡದಿಂದ ಹೊಗೆಯಾಡುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂಧಿಗಳು ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250584
Today
Yesterday
This Week
Last Week
This Month
Last Month
All days
9991
16742
76312
4062809
281679
395132
4250584
Your IP: 54.234.190.237
2018-01-18 16:03