Breaking News

ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ : ಅಣ್ಣಾ ಹಜಾರೆ

Written by 
Published: 05 January 2018
33 times Last modified on Friday, 05 January 2018 10:33

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜ.05;

ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸುವ ಮಾತನಾಡುವವರನ್ನು ಆಸ್ಪತ್ರೆಗೆ ಸೇರಿಸಿ ಮಾನಸಿಕ ಚಿಕಿತ್ಸೆ ಕೊಡಿಸಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಕಿಡಿ ಕಾರಿದರು.

ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ. ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಸರ್ಕಾರಗಳು ನಡೆಯುತ್ತಿರುವುದು. ಹಾಗಾಗಿ, ಅದನ್ನು ಬದಲಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ವೇಳೆ ನೋಟು ರದ್ದತಿ ಕುರಿತು ಮಾತನಾಡಿ, ಗರಿಷ್ಠ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಮಾಡಿದ್ದರಿಂದ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250415
Today
Yesterday
This Week
Last Week
This Month
Last Month
All days
9822
16742
76143
4062809
281510
395132
4250415
Your IP: 54.234.190.237
2018-01-18 15:54