Breaking News

ಫೆ.22ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 

Written by 
Published: 03 January 2018
28 times Last modified on Wednesday, 03 January 2018 05:37

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.03;

ಫೆ.22 ರಿಂದ ಮಾರ್ಚ್ 1ರವರೆಗೆ 10ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ನಡೆಯಲಿದೆ.

ನಗರದ ವಿಧಾನಸೌಧ ಮುಂಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಈ ಚಲನಚಿತ್ರೋತ್ಸವದಲ್ಲಿ ಇಡೀ ಉದ್ಯಮ ಸಕ್ರಿಯವಾಗಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ಚಿತ್ರೋತ್ಸವದ ಉದ್ಘಾಟನಾ ದಿನವಾದ ಫೆ.22 ಹಾಗೂ ಸಮಾರೋಪ ನಡೆಯಲಿರುವ ಮಾರ್ಚ್ 1ರಂದು ಚಿತ್ರೀಕರಣ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. 

ಕಳೆದ ವರ್ಷ ಮೈಸೂರಿನಲ್ಲಿ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಆದರೆ ಈ ವರ್ಷ ವಿಧಾನಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೊಳ್ಳುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೇ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭವನ್ನು ನಡೆಸಲು ಉದ್ದೇಶಿಸಲಾಗಿದೆ. 

ಚಲನಚಿತ್ರೋತ್ಸವದಲ್ಲಿ, ಜಗತ್ತಿನ ನಾನಾ ಭಾಷೆಗಳ 800ಕ್ಕೂ ಅಧಿಕ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ನಗರದ 11 ಚಿತ್ರಮಂದಿರಗಳಲ್ಲಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಮಂತ್ರಿ ಮಾಲ್ ನಲ್ಲೂ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಳೆದ ಬಾರಿ 8ಕೋಟಿ ರೂ. ನೀಡಲಾಗಿತ್ತು, ಈ ವರ್ಷ 10 ಕೋಟಿ ರೂ. ನೆರವು ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274325
Today
Yesterday
This Week
Last Week
This Month
Last Month
All days
760
15484
100053
4062809
305420
395132
4274325
Your IP: 54.167.126.106
2018-01-20 01:13