Breaking News

ಜ.27ಕ್ಕೆ ಕರ್ನಾಟಕ ಬಂದ್

Written by 
Published: 11 January 2018
60 times Last modified on Thursday, 11 January 2018 09:30

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.11;

ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಜನವರಿ 27ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನಿನ್ನೆ ತಿಳಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ, ಜನವರಿ 27ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ, ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬಸ್‌, ಲಾರಿ, ಆಟೋರಿಕ್ಷಾ, ಟ್ಯಾಕ್ಸಿ ಸಂಚಾರ, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶಾಲಾ–ಕಾಲೇಜುಗಳು ಬಂದ್ ಆಗಲಿವೆ. ಆಸ್ಪತ್ರೆ, ಔಷಧಿ ಅಂಗಡಿ, ಹಾಲು, ಮಾಧ್ಯಮ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ವಿನಾಯಿತಿ ನೀಡಲಾಗುವುದು ಎಂದು ಹೇಳಿದರು.

ಜನವರಿ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದರಿಂದ, ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜ.27ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಒಂದು ವೇಳೆ ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಭರವಸೆ ನೀಡಿದರೆ ಬಂದ್ ವಾಪಸ್ ಪಡೆಯಲಾಗುವುದು ಎಂದು ಹೇಳಿದರು.  

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250573
Today
Yesterday
This Week
Last Week
This Month
Last Month
All days
9980
16742
76301
4062809
281668
395132
4250573
Your IP: 54.234.190.237
2018-01-18 16:03