Breaking News

ಕರ್ನಾಟಕದ ಅಭಿವೃದ್ಧಿಗಾಗಿ ಕಾಂಗ್ರೆಸ್ ತೊಲಗಿಸಿ, ಬಿಜೆಪಿ ಅಧಿಕಾರಕ್ಕೆ ತನ್ನಿ : ಯೋಗಿ ಆದಿತ್ಯನಾಥ್

Written by 
Published: 07 January 2018
91 times Last modified on Sunday, 07 January 2018 10:59

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.07;

ಕರ್ನಾಟಕದ ಅಭಿವೃದ್ಧಿಗಾಗಿ ಕಾಂಗ್ರೆಸ್ ತೊಲಗಿಸಿ, ಬಿಜೆಪಿ ಅಧಿಕಾರಕ್ಕೆ ತನ್ನಿ' ಎಂದು ಯೋಗಿ ಆದಿತ್ಯನಾಥ್ ಕರೆ ನೀಡಿದರು.

ನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ಹಾಗೂ ಇಲ್ಲಿನ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಕೇಂದ್ರ ಸರ್ಕಾರ ಯುವಕರಿಗೆ, ರೈತರಿಗೆ ಜಾರಿಗೆ ತಂದಂತಹ ಯೋಜನೆಗಳು ಕರ್ನಾಟಕದ ಜನರಿಗೆ ತಲುಪುತ್ತಿಲ್ಲ. ತಲುಪಲು ರಾಜ್ಯ ಸರ್ಕಾರ ಬಿಡುತ್ತಿಲ್ಲ. ಕಾಂಗ್ರೆಸ್ ಸದ್ಯ ದೇಶದ ದೊಡ್ಡ ಸಮಸ್ಯೆ, ಆದ್ದರಿಂದ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ, ಬಿಜೆಪಿಯನ್ನು ಅಧಿಕಾರಿಕ್ಕೆ ತನ್ನಿ' ಎಂದರು. 

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಧೋರಣೆಯನ್ನು ಕಟುವಾಗಿ ಟೀಕಿಸಿದ ಅವರು, ಹಿಂದುತ್ವ ಭಾರತದ ಜೀವನ ಪರಂಪರೆ. ನಾನು ಹಿಂದೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದನ್ನು ಇಂದಿನ ಪತ್ರಿಕೆಯಲ್ಲಿ ಓದಿದ್ದೇನೆ. ಅವರು ಹಿಂದುವಾದರೆ ಗೋ ಹತ್ಯೆ ನಿಷೇಧದ ಸಂದರ್ಭದಲ್ಲಿ ಏಕೆ ಬೆಂಬಲ ನೀಡಲಿಲ್ಲ?' ಎಂದು ಆದಿತ್ಯನಾಥ್ ಪ್ರಶ್ನಿಸಿದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಯೋಗಿ ಆದಿತ್ಯನಾಥ್ 'ನನ್ನ ಸಹೋದರ ಸಹೋದರಿಯರೇ, ನಿಮಗೆಲ್ಲಾ ನನ್ನ ನಮಸ್ಕಾರಗಳು' ಎಂದು ನುಡಿದರು. ರಾಜ್ಯದ ಅಭಿವೃದ್ಧಿಯಾಗಬೇಕಾದರೆ ಕೇಂದ್ರ ಮತ್ತು ರಾಜ್ಯದಲ್ಲಿ ಸಮಾನ ವಿಚಾರಧಾರೆಯ ಒಂದೇ ಪಕ್ಷ ಅಧಿಕಾರದಲ್ಲಿರಬೇಕು. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಕರ್ನಾಟಕಕ್ಕೆ ಮೆಟ್ರೋ ರೈಲನ್ನು ಮಂಜೂರು ಮಾಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದರು. ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಮಂಜೂರು ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಅಭಿವೃದ್ದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‍ನ್ನು ತೊಲಗಿಸಲಾಗಿದೆ. ಇತ್ತೀಚೆಗೆ ನಡೆದ ಗುಜರಾತ್, ಹಿಮಾಚಲಪ್ರದೇಶ ಚುನಾವಣೆಯಲ್ಲೂ ಕಾಂಗ್ರೆಸ್ ಮೂಲೆಗುಂಪಾಗಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ತೊಲಗುವವರೆಗೂ ಅಭಿವೃದ್ದಿ ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ, ಪಿಯೂಶ್ ಗೋಯಲ್, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ ಸೇರಿದಂತೆ ಹಲವಾರು ಮುಖಂಡರು ಇದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274362
Today
Yesterday
This Week
Last Week
This Month
Last Month
All days
797
15484
100090
4062809
305457
395132
4274362
Your IP: 54.167.126.106
2018-01-20 01:16