Breaking News

ಕೇಂದ್ರಸರ್ಕಾರ ನೀಡಿದ ಬಹುಪಾಲು ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನುಂಗಿದೆ : ಶಾ ಆರೋಪ

Written by 
Published: 10 January 2018
137 times Last modified on Wednesday, 10 January 2018 10:38

ಕೆ.ಎನ್.ಪಿ.ವಾರ್ತೆ,ಚಿತ್ರದುರ್ಗ,ಜ.10;

ಕೇಂದ್ರದ ಮೋದಿ ಸರ್ಕಾರ ನೀಡಿದ ಬಹುಪಾಲು ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನುಂಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಆಯೋಜನೆಗೊಂಡಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಕರ್ನಾಟಕಕ್ಕೆ 2.19 ಲಕ್ಷ ಕೋಟಿ ರೂಪಾಯಿ ಅನುದಾನ ಬಂದಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರ ಕೊಟ್ಟ ಹಣದ ಬಹುಪಾಲು ಅನುದಾನವನ್ನು ನುಂಗಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಟ್ಟಿದೆ ಎಂದು ಲೆಕ್ಕ ಕೇಳಿದ್ದರು, ನಾನಿಂದು ಬಂದಿರುವುದು ಅದೇ ಲೆಕ್ಕ ಹೇಳಲು ಎಂದ ಅಮಿತ್ ಶಾ, ಕೇಂದ್ರದಿಂದ ರಾಜ್ಯಕ್ಕೆ ನೀಡಲಾಗಿರುವ ಎಲ್ಲಾ ಅನುದಾನಗಳ ಲೆಕ್ಕ ಒಪ್ಪಿಸಿದರು ಹಾಗೂ ಸಿದ್ದರಾಮಯ್ಯ ಅವರು ಕೇಂದ್ರದಿಂದ ಬಂದ ಅನುದಾನವನ್ನು ತಮ್ಮದೇ ಅನುದಾನ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ವಾಚ್ ಹಗರಣದ ನೆನಪು ಮಾಡಿದ ಅಮಿತ್ ಶಾ ಅವರು, ಸಿದ್ದರಾಮಯ್ಯ ಅವರಿಗೆ 70 ಲಕ್ಷ ರೂಪಾಯಿಯ ಗಡಿಯಾರ ಉಡುಗೊರೆಯಾಗಿ ಬರುತ್ತದೆ, ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟಿರುವ ಕಾರಣದಿಂದಲೇ ಅವರಿಗೆ ಈ ರೀತಿಯ ಭಾರಿ ಬೆಲೆಯ ಉಡುಗೊರೆಗಳು ಸಿಗುತ್ತವೆ ಎಂದು ಲೇವಡಿ ಮಾಡಿದರು. ಇದೇ ವೇಳೆ ಅರ್ಕಾವತಿ ಬಡಾವಣೆಯಲ್ಲಿನ ಹಗರಣ, ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಎಲ್ಲವನ್ನೂ ಪ್ರಸ್ತಾಪಿಸಿ, ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

ಅಮಿತ್ ಷಾ ಮಾಡಿದ ಹಿಂದಿ ಭಾಷಣವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಕನ್ನಡಕ್ಕೆ ಅನುವಾದಿಸಿ ಓದಿದರು. ಈ ವೇಳೆ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ, ಅನಂತ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಪ್ರಕಾಶ್ ಜಾವ್ಡೇಕರ್, ಪಿಯೂಶ್ ಗೋಯಲ್, ರಾಜ್ಯ ಉಸ್ತುವಾರಿ ಮರಳೀಧರ್ ರಾವ್, ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಮುಖಂಡರಾದ ಈಶ್ವರಪ್ಪ, ಜಗದೀಶ್ ಶೆಟ್ಟರ್, ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು. 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250538
Today
Yesterday
This Week
Last Week
This Month
Last Month
All days
9945
16742
76266
4062809
281633
395132
4250538
Your IP: 54.234.190.237
2018-01-18 16:01