Breaking News

ಖಾಸಗಿ ಆಸ್ಪತ್ರೆಗಳ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

Written by 
Published: 02 January 2018
37 times Last modified on Tuesday, 02 January 2018 11:17

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.02;

ರಾಷ್ಟ್ರೀಯ ವೈದ್ಯ ಆಯೋಗ ಮಸೂದೆ-2017ನ್ನು ವಿರೋಧಿಸಿ, ಇಂದು ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಬಂದ್‍ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಂದ್'ಗೆ ಕರೆ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಕೇಂದ್ರ ಸರ್ಕಾರ ಮಂಡಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ-2017ರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಇಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೊರರೋಗಿಗಳ ಸೇವೆ ಬಂದ್ ಮಾಡಿದ್ದರಿಂದ ಆರೋಗ್ಯ ಸೇವೆಗಳಲ್ಲಿ ಕೊಂಚ ವ್ಯತ್ಯಯವಾಯಿತು.

ಸರ್ಕಾರಿ ಆಸ್ಪತ್ರೆಗಳು ಮುಂಜಾಗ್ರತಾ ಕ್ರಮವಾಗಿ ಸೇವೆಗೆ ಮುಂದಾಗಿದ್ದರಿಂದ ಬಂದ್‍ನ ಪರಿಣಾಮ ಅಷ್ಟಾಗಿ ಬೀರಲಿಲ್ಲ. ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಪ್ರತಿಭಟನೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿರುವುದು ವರದಿಯಾಗಿದೆ.

ಇನ್ನೂ ಹಲವೆಡೆ ಖಾಸಗಿ ಆಸ್ಪತ್ರೆಗಳವರು ಬೆಳಗ್ಗೆ 6ರಿಂದಲೇ ಒಪಿಡಿಗಳನ್ನು ಬಂದ್ ಮಾಡಿ ಪ್ರತಿಭಟನೆಗಿಳಿದಿದ್ದರಿಂದ ರೋಗಿಗಳು ಪರದಾಡುವಂತಾಯಿತು. ರೋಗಿಗಳಿಗೆ ತೊಂದರೆಯಾಗಬಾರದು ಎಂದು ಸರ್ಕಾರಿ ವೈದ್ಯರು ಪೂರ್ಣಾವಧಿ ಸೇವೆ ಸಲ್ಲಿಸುವಂತೆ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಾನವೀಯ ದೃಷ್ಟಿಯಿಂದ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಹಲವು ಖಾಸಗಿ ಆಸ್ಪತ್ರೆಗಳವರು ತಿಳಿಸಿದ್ದಾರೆ. ಪ್ರತಿಭಟನೆ ಗೊತ್ತಿಲ್ಲದ ಕಾರಣ ರೋಗಿಗಳಿಗೆ ಅಪಾಯಿಂಟ್‍ಮೆಂಟ್ ನೀಡಿದ್ದೇವೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಮಧ್ಯಾಹ್ನದ ನಂತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಗದಗ ಜಿಲ್ಲೆಯಾದ್ಯಂತ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರ ನಿರತ ವೈದ್ಯರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಎಲ್ಲ ಸೇವೆಗಳನ್ನೂ ಬಂದ್ ಮಾಡಿ ಮುಷ್ಕರ ಮಾಡುತ್ತಿರುವುದಾಗಿ ಐಎಂಎ ಜಿಲ್ಲಾಧ್ಯಕ್ಷ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಲವು ಖಾಸಗಿ ಆಸ್ಪತ್ರೆಗಳು ಸೇವೆ ಮುಂದುವರಿಸಿದ್ದು, ಮತ್ತೆ ಕೆಲವರು ಸೇವೆ ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಕೋಲಾರ ಸೇರಿದಂತೆ ಬಹುತೇಕ ಕಡೆ ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಂಡಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250398
Today
Yesterday
This Week
Last Week
This Month
Last Month
All days
9805
16742
76126
4062809
281493
395132
4250398
Your IP: 54.234.190.237
2018-01-18 15:53