Breaking News

ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ

Written by 
Published: 18 December 2017
53 times Last modified on Monday, 18 December 2017 07:25

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.18;

ವರದಿ : ಬಸವರಾಜ್ ಪೂಜಾರ್

ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು.

ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹನುಮಂತಪ್ಪ ಎಂಬುವವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು. ಹಾಗೂ ಉಪಾದ್ಯಕ್ಷರ ಸ್ಥಾನಕ್ಕೆ ನೇತ್ರಾವತಿ ಎಂಬುವವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ, ಎಲ್ಲ ಸದಸ್ಯರು ಸೇರಿ ಇವರನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. ಈ ವೇಳೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಹನುಮಂತಪ್ಪ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿ ರಮೇಶ್ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

shivakumar h

There is will There is way 

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250517
Today
Yesterday
This Week
Last Week
This Month
Last Month
All days
9924
16742
76245
4062809
281612
395132
4250517
Your IP: 54.234.190.237
2018-01-18 15:59