Breaking News

ಮಹದಾಯಿ ವಿವಾದ : ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

Written by 
Published: 03 January 2018
32 times Last modified on Wednesday, 03 January 2018 08:28

ಕೆ.ಎನ್.ಪಿ.ವಾರ್ತೆ,ಬೆಂಗಳೂರು, ಜ.03;

ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ, ಇಂದು ಕನ್ನಡ ಒಕ್ಕೂಟದ ವತಿಯಿಂದ ನಗರದ ನೆಲಮಂಗಲ ಟೋಲ್ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಗೋವಾ-ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಉದ್ಭವಿಸಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದದಿಂದ ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಂತಾಗಿದೆ. ಇದನ್ನು ಕೂಡಲೇ ಪ್ರಧಾನಿ ನೇತೃತ್ವದಲ್ಲಿ ಪರಿಹರಿಸಿ ನೀರು ಹಂಚಿಕೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಬಂದ್ ನಡೆಸಿದವು.

ರಸ್ತೆಯಲ್ಲಿ ಜಮಾಯಿಸಿದ ನೂರಾರು ಮಂದಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಆಕ್ರೋಶ ವ್ಯಕ್ತಪಡಿಸಿ ಕುಡಿಯುವ ನೀರು ಎಲ್ಲರ ಮೂಲಭೂತ ಹಕ್ಕಾಗಿದ್ದು, ಇಂತಹ ಸಮಸ್ಯೆ ಉಭಯ ರಾಜ್ಯಗಳ ನಡುವೆ ಭುಗಿಲೆದ್ದಾಗ ಸಂಧಾನ ಮಾತುಕತೆ ಮೂಲಕ ಬಗೆಹರಿಸಬೇಕು. ಆದರೆ ಪ್ರಧಾನಮಂತ್ರಿಗಳು ಇದುವರೆಗೂ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮುಂದಾಗಿಲ್ಲ ಎಂದು ಕಿಡಿಕಾರಿದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನಸೆಳೆಯಲು ಇಂದು ಬೆಳಗಾವಿಯಿಂದ ಬೆಂಗಳೂರುವರೆಗೆ ನಗರಗಳ ಹೆದ್ದಾರಿ ಬಂದ್ ನಡೆಸಲಾಯಿತು.

ಇಂದು ಬೆಳಿಗ್ಗೆ ನೆಲಮಂಗಲದ ಟೋಲ್ ಬಳಿ ನಾಡಿನ ಸಮಾನ ಮನಸ್ಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ಶಾಶ್ವತ ಕುಡಿಯುವ ನೀರು ಹೋರಾಟಗಾರರು ಒಗ್ಗೂಡಿ ಕರ್ನಾಟಕ ರಾಜ್ಯ ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಲಾಗಿತ್ತು. ಈ ವೇಳೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ಕುಮಾರ್, ಕರವೇ ಪ್ರವೀಣ್‍ಶೆಟ್ಟಿ ಸೇರಿದಂತೆ ಹಲವಾರು ಮಂದಿ ರಸ್ತೆ ಬಂದ್ ಮಾಡಿ ವಿವಾದ ಬಗೆಹರಿಸಲು ಆಗ್ರಹಿಸಿದರು.

ಕೃಪೆ : ಆನ್ ಲೈನ್

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250441
Today
Yesterday
This Week
Last Week
This Month
Last Month
All days
9848
16742
76169
4062809
281536
395132
4250441
Your IP: 54.234.190.237
2018-01-18 15:55