Breaking News

ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Written by 
Published: 12 January 2018
48 times Last modified on Friday, 12 January 2018 14:23

ಕೆ.ಎನ್.ಪಿ.ವಾರ್ತೆ, ದಾವಣಗೆರೆ,ಜ.12;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದ ಸಿದ್ದಮ್ಮ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ಸಿದ್ದತೆ ಜಾಗೃತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಶಾಲೆಯ ಮುಖ್ಯಶಿಕ್ಷಕ ಪಾಲಯ್ಯ ನವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಪಿ.ಎಸ್. ಅರವಿಂದ್,  ವಿದ್ಯಾರ್ಥಿಗಳು ಪರೀಕ್ಷೆಯೆಂದರೆ ಭಯ ಪಡುವ ಅವಶ್ಯಕತೆ ಇಲ್ಲಾ. ಭಯಪಟ್ಟು ಓದಿದರೆ ಮರೆಯುತ್ತೀರ. ಒಂದು ವೇಳಾಪಟ್ಟಿ ಸಿದ್ದಪಡಿಸಿಕೊಂಡು ಪ್ರತಿದಿನ ಪರೀಕ್ಷೆಗೆ ಓದಲು ಆರಂಭಿಸಿದರೆ   ಸಮಯ ವ್ಯರ್ಥವಾಗುವುದಿಲ್ಲ ಒಳ್ಳೆಯ ಫಲಿತಾಂಶ ಪಡೆಯಬಹುದು ಎಂದು ಹೇಳಿದರು.

18ವರ್ಷ ತುಂಬದೆ ಇರುವಂತಹ ಮಕ್ಕಳಿಗೆ ಶಾಲೆ ಬಿಡಿಸಿ, ಪೋಷಕರು ಮದುವೆ ಮಾಡುತ್ತಾರೆ. ಇಂತಹ ಘಟನೆಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಗೆ ಕರೆಮಾಡಿ ತಿಳಿಸಿ ಎಂದರು. ನಂತರ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ತಡೆಯುವ ಬಗ್ಗೆ ಮತ್ತು ಕಾನೂನಿನ ಬಗ್ಗೆ ಮಾಹಿತಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೇರಣ ಸಮಾಜ ಸಂಸ್ಥೆಯ ಚರ್ಚ್ ಫಾದರ್ ವಿಲಿಯಂ ಮಿರಾಂದ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಯೋಜನ ಅಧಿಕಾರಿ ಮಮತ ಸೇರಿದಂತೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಮತ್ತು ಶಾಲೆಯ ಮಕ್ಕಳು ಹಾಜರಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250595
Today
Yesterday
This Week
Last Week
This Month
Last Month
All days
10002
16742
76323
4062809
281690
395132
4250595
Your IP: 54.234.190.237
2018-01-18 16:04