Breaking News

ಮಂಗಳೂರು : ಹಲ್ಲೆಗೊಳಗಾಗಿದ್ದ ಬಶೀರ್ ನಿಧನ

Written by 
Published: 07 January 2018
37 times Last modified on Sunday, 07 January 2018 12:08

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.07;

ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಅಹಮ್ಮದ್ ಬಶೀರ್ ನಗರದ ಎ.ಜೆ. ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ನಗರದ ಕೊಟ್ಟಾರ ಚೌಕಿ ಬಳಿ, ಡಿ.03ರಂದು ರಾತ್ರಿ ನಾಲ್ವರು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಅಹಮ್ಮದ್ ಬಶೀರ್ (47) ಎ.ಜೆ. ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.  ಬಶೀರ್ ಅವರಿಗೆ ಹಲವು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ತೀವ್ರನಿಗಾ ಘಟಕದಲ್ಲಿದ್ದ ಅವರು ಬೆಳಿಗ್ಗೆ 8.05ಕ್ಕೆ ನಿಧನರಾದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ನಡೆದ ಘಟನೆ :

ಡಿ.03ರಂದು ರಾತ್ರಿ, ಕಾಟಿಪಳ್ಳದಲ್ಲಿ ದೀಪಕ್ ರಾವ್ ಕೊಲೆ ನಡೆದ ಬಳಿಕ ಪ್ರತೀಕಾರವಾಗಿ ನಾಲ್ವರು ದುಷ್ಕರ್ಮಿಗಳು ಬಶೀರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಶೀರ್ ಮೇಲೆ‌ ದಾಳಿ‌ ನಡೆಸಿದ್ದ ಪಡೀಲ್ ನಿವಾಸಿಗಳಾದ ಧನುಷ್, ಕಿಶನ್, ಕಾಸರಗೋಡು ಜಿಲ್ಲೆಯ ಶ್ರೀಜಿತ್ ಮತ್ತು ಸಂದೇಶ್ ಕೋಟ್ಯಾನ್ ಎಂಬ ಯುವಕರನ್ನು ನಗರ ಅಪರಾಧ ಘಟಕದ ಪೊಲೀಸರು ನಿನ್ನೆ ಬಂಧಿಸಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274351
Today
Yesterday
This Week
Last Week
This Month
Last Month
All days
786
15484
100079
4062809
305446
395132
4274351
Your IP: 54.167.126.106
2018-01-20 01:15