Breaking News

ಪರಿವರ್ತನಾ ಯಾತ್ರೆ ಯಶಸ್ವಿಗೊಳಿಸಿ : ಸಂದೀಪ್ ಸಿಂಗ್

Written by 
Published: 10 December 2017
51 times Last modified on Sunday, 10 December 2017 07:26

ಕೆ.ಎನ್.ಪಿ.ವಾರ್ತೆ,ಹೊಸಪೇಟೆ,ಡಿ.10;

ವರದಿ : ರಾಮಕೃಷ್ಣ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಯಾತ್ರೆ ಜ.06ರಂದು ಹೊಸಪೇಟೆಗೆ ಆಗಮಿಸಲಿದೆ. ಈ ಕಾರ್ಯಕ್ರಮದಲ್ಲಿ ಅತಿಹೆಚ್ಚು ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಬಿಜೆಪಿ ಹೊಸಪೇಟೆ ತಾಲೂಕು ಅಧ್ಯಕ್ಷ ಸಂದೀಪ್ ಸಿಂಗ್ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸಂಸದ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಒಂಭತ್ತು ವರ್ಷಗಳಿಂದ ಶಾಸಕ ಆನಂದ್ ಸಿಂಗ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದರಲ್ಲೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕ್ಷೇತ್ರದಲ್ಲಿ ಅತಿಹೆಚ್ಚು ಅಭಿವೃದ್ಧಿಗೆ ಹಣ ನೀಡಿದ್ದರು. ಅಂದಿನ ರಾಜ್ಯ ಬಿಜೆಪಿ ಸರ್ಕಾರ ಮತ್ತು ಪ್ರಸಕ್ತ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಯಡಿಯೂರಪ್ಪ ಯಾತ್ರೆ ಮೂಲಕ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ಪ್ರತಿಯೊಬ್ಬರೂ ಯಡಿಯೂರಪ್ಪ ಅವರ ಕೈ ಬಲಪಡಿಸಬೇಕೆಂದರು.

ಇನ್ನೂ ಇದೇ ವೇಳೆ ಮಾತನಾಡಿದ ಸಂಸದ ಶ್ರೀರಾಮುಲು, ಜಿಲ್ಲೆಯ ಒಂಭತ್ತು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವಂತೆ ಮಾಡಬೇಕೆಂದರು. ಈ ವೇಳೆ ಜಿಲ್ಲಾಧ್ಯಕ್ಷ ಚನ್ನಬಸವನ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮರೆಡ್ಡಿ, ಮುರಾರಿ ಗೌಡ, ಪೂಜಪ್ಪ, ಅನಿಲ್ ನಾಯ್ಡು, ಅಶೋಕ್ ಜೀರೆ, ಕಿಚಿಡಿ ಶ್ರೀನಿವಾಸ, ಶ್ರೀನಿವಾಸ ವ್ಯಾಸ, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ ಜಂಬಯ್ಯ ನಾಯಕ, ಮಂಡಲ ಪದಾಧಿಕಾರಿಗಳು, ಮೋರ್ಚಾ,ನಗರ ಘಟಕ ಮತ್ತು ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಹಿರಿಯ ಮುಖಂಡರು ಇದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250493
Today
Yesterday
This Week
Last Week
This Month
Last Month
All days
9900
16742
76221
4062809
281588
395132
4250493
Your IP: 54.234.190.237
2018-01-18 15:58