Breaking News

ರಾಜ್ಯದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳಿಂದ ಪ್ರತಿಭಟನೆ

Written by 
Published: 09 January 2018
22 times Last modified on Tuesday, 09 January 2018 16:27

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.09;

ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ, ರಾಜ್ಯದ ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳು ನಾಳೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ಪ್ರಕಾಶಕರ ಮತ್ತು ಪುಸ್ತಕ ವ್ಯಾಪಾರಿಗಳ ಸಂಘ ನಾಳೆ ಬೆಳಗ್ಗೆ 10.30ರಿಂದ 12.30ರವರೆಗೆ ಬೆಂಗಳೂರಿನ ಟೌನ್‍ಹಾಲ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದೆ.  

ಶಾಲಾ-ಕಾಲೇಜುಗಳ ಪಠ್ಯಪುಸ್ತಕಗಳನ್ನು ಜೆರಾಕ್ಸ್ ಮಾಡುತ್ತಿರುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಪುಸ್ತಕ ಉದ್ಯಮಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ ಎಂದು ಸಂಘದ ಪದಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಇತರ ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ವಹಿವಾಟಿಗೆ ಧಕ್ಕೆಯಾಗಿದೆ ಎಂದು ಸಂಘ ಆರೋಪಿಸಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ಹಿತ ರಕ್ಷಿಸಬೇಕು ಎಂದು ಸಂಘ ಮನವಿ ಮಾಡಿದೆ. ನಗರದ ಟೌನ್‍ಹಾಲ್ ಬಳಿ ಪ್ರತಿಭಟನೆ ನಡೆಸುವ ಜೊತೆಗೆ ನಾಳೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಪುಸಕ್ತ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250541
Today
Yesterday
This Week
Last Week
This Month
Last Month
All days
9948
16742
76269
4062809
281636
395132
4250541
Your IP: 54.234.190.237
2018-01-18 16:01