Breaking News

ಸಚಿವ ಅನಂತಕುಮಾರ ಹೆಗಡೆ ವಿರುದ್ದ ಕಪ್ಪು ಬಾವುಟ ಪ್ರದರ್ಶನ

Written by 
Published: 08 January 2018
31 times Last modified on Monday, 08 January 2018 08:15

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜ.08;

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ದ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಇಂದು ಕಪ್ಪು ಬಾವುಟ ಪ್ರದರ್ಶಿಸಿದರು.

ಸಂವಿಧಾನ ಬದಲಾವಣೆ ಹೇಳಿಕೆ ನೀಡಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ, ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ದ ದಲಿತ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಾವುಟ ಹಿಡಿದು ಪ್ರತಿಭಟಿಸಿದರು. ನಗರದ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದರು. 

ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ದಲಿತ ಮುಖಂಡರಾದ ಗಜು ಧರನಾಯಕ, ಮೋಹನ ಕಾಂಬಳೆ ಸೇರಿದಂತೆ 30ಕ್ಕೂ ಹೆಚ್ಚು ದಲಿತ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿದ್ದಾರೆ.  

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250535
Today
Yesterday
This Week
Last Week
This Month
Last Month
All days
9942
16742
76263
4062809
281630
395132
4250535
Your IP: 54.234.190.237
2018-01-18 16:01