Breaking News

ಸತ್ತವರ ಹೆಣದ ಮೇಲೆ ರಾಜಕೀಯ ಮಾಡುತ್ತಿರುವುದು ಖಂಡನೀಯ : ಸಿಎಂ

Written by 
Published: 07 January 2018
41 times Last modified on Sunday, 07 January 2018 11:38

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.07;

ಸತ್ತವರ ಹೆಣದ ಮೇಲೆ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ, ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 76ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಈ ನಡುವೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ಮೃತಪಟ್ಟ ದೀಪಕ್ ರಾವ್ ಹಾಗೂ ಅಬ್ದುಲ್ ಬಷೀರ್ ಅವರ ಸಾವಿಗೆ ಸಂತಾಪ ಸೂಚಿಸಲಾಯಿತು.

ನಂತರ ಮಾತನಾಡಿದ ಅವರು, ದಕ್ಷಿಣಕನ್ನಡ ಜಿಲ್ಲೆ ಕೋಮುವಾದದ ಪ್ರಯೋಗಾಲಯ ಆಗಬಾರದು. ನಾವು ಧರ್ಮ ಪಾಲಕರಾಗಬೇಕೇ ಹೊರತು ಯಾವತ್ತಿಗೂ ಧರ್ಮ ವಿರೋಧಿಯಾಗಬಾರದು, ಸಮಾಜದ ಶಾಂತಿ ಕದಡುವವರ ವಿರುದ್ಧ ಹೋರಾಟ ನಡೆಸುವ ಅವಶ್ಯಕತೆ ಇದೆ. ಸತ್ತವರ ಹೆಣದ ಮೇಲೆ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಿರುದ್ದ ಸಿಎಂ ವಾಗ್ದಾಳಿ ನಡೆಸಿದರು. ಸಮಾಜದಲ್ಲಿ ನೆಮ್ಮದಿ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಯಾವುದೇ ರಾಜಕೀಯ ಪಕ್ಷಗಳಾಗಲಿ, ಸಂಘಟನೆಗಳಾಗಲಿ ಘರ್ಷಣೆಗೆ ಪ್ರಚೋದಿಸಬಾರದು. ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕೆಂದು ಮನವಿ ಮಾಡಿದರು. 

ಕೃಪೆ : ಆನ್ ಲೈನ್

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274338
Today
Yesterday
This Week
Last Week
This Month
Last Month
All days
773
15484
100066
4062809
305433
395132
4274338
Your IP: 54.167.126.106
2018-01-20 01:14