Breaking News

ಸುಪಾರಿ ಕೇಸ್ : ಬೆಳಗೆರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

Written by 
Published: 13 December 2017
66 times Last modified on Wednesday, 13 December 2017 12:05

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.13;

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರವಿ ಬೆಳಗೆರೆ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ.

ಕಳೆದ ಏಳು ದಿನಗಳ ಹಿಂದೆ ಸಿಸಿಬಿ ಪೊಲೀಸರಿಂದ ನ್ಯಾಯಾಂಗ ಬಂಧನದಲ್ಲಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅನಾರೋಗ್ಯದ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿ ಹಾಗೂ 1 ಲಕ್ಷ ರೂ ಬಾಂಡ್ ಸಲ್ಲಿಸಿ, ಜೈಲಿನಿಂದ ಬಿಡುಗಡೆಯಾಗಬಹುದಾಗಿದೆ. ರವಿ ಬೆಳಗೆರೆಗೆ ಡಿ.16ರ ತನಕ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ರವಿ ಬೆಳಗೆರೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿತ್ತು. ಬೆಳಗೆರೆ ಅನಾರೋಗ್ಯದಿಂದ ತೀವ್ರ ಅಸ್ವಸ್ಥಕ್ಕೊಳಗಾದ ಕಾರಣ ಸದ್ಯ ಅವರನ್ನೂ ಪರಪ್ಪನ ಅಗ್ರಹಾರ ಜೈಲಿನಿಂದ ಬನ್ನೇರುಘಟ್ಟ ರಸ್ತೆಯ ಜಯದೇವ ಆಸ್ಪತ್ರೆಯ ಆವರಣದಲ್ಲಿರುವ ಕರ್ನಾಟಕ ಮಧುಮೇಹ ಸಂಸ್ಥೆ (ಕೆಐಡಿ)ಗೆ ಸ್ಥಳಾಂತರಿಸಲಾಗಿದೆ.

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250514
Today
Yesterday
This Week
Last Week
This Month
Last Month
All days
9921
16742
76242
4062809
281609
395132
4250514
Your IP: 54.234.190.237
2018-01-18 15:59