Breaking News

ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಕಣಕ್ಕೆ

Written by 
Published: 26 September 2017
39 times Last modified on Tuesday, 26 September 2017 11:07

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.26;

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ 2018ರ ವಿಧಾನಸಭೆ ಚುನಾವಣೆಗೆ  ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಈ ಹಿಂದೆ ಕೇಂದ್ರ ಬಿಜೆಪಿ ವರಿಷ್ಠರ ಸೂಚನೆಯಂತೆ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಸದ್ಯದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆ ತೇರದಾಳ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಗೆ ಯಡಿಯೂರಪ್ಪ ಸ್ಪರ್ಧಿಸುತ್ತಿರುವುದು ಬಹುತೇಕ ಖಚಿತವಾಗಿದೆ.

ಈಗಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿರುವ ಉಮಾಶ್ರಿಯವರು ಕೂಡ ಇದೇ ಕ್ಷೇತ್ರದಿಂದ ಅಖಾಡಕ್ಕಿಳಿಯಲಿದ್ದಾರೆ. ಹೀಗಾಗಿ 2018ರ ವಿಧಾನಸಭೆ ಚುನಾವಣೆಯಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯಲಿದೆ. 2009ರಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಯ ಸಿದ್ದು ಸವದಿ ಗೆಲುವು ಸಾಧಿಸಿದ್ದರು. ಮತ್ತು 2013ರ ಚುನಾವಣೆಯಲ್ಲಿ ಉಮಾಶ್ರೀ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಸಿದ್ದು ಸವದಿ ಸೋಲುಂಡಿದ್ದರು.

ಪ್ರಸ್ತುತ ಬಾಗಲಕೋಟೆ ಬಿಜೆಪಿ ಜಿಲಾಧ್ಯಕ್ಷರಾಗಿರುವ ಸಿದ್ದು ಸವದಿ ಬಿಎಸ್‍ವೈ ನಿಂತರೆ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಲು ಸಿದ್ಧರಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉಮಾಶ್ರೀ ಅವರ ವಿರುದ್ಧ ಬಿಎಸ್ ವೈ ಕಣಕ್ಕಿಳಿಯಲಿದ್ದಾರೆ. ಇನ್ನು ಸಿದ್ದು ಸವದಿಗೆ ವಿಧಾನ ಪರಿಷತ್‍ಗೆ ಆಯ್ಕೆ ಮಾಡುವ ಭರವಸೆ ನೀಡಲಾಗಿದೆ. ಎಲ್ಲವನ್ನೂ ಲೆಕ್ಕಾಚಾರ ಹಾಕಿರುವ ಯಡಿಯೂರಪ್ಪ ಇನ್ನೊಂದು ಬಾರಿ ಬಾಗಲಕೋಟೆ ಮುಖಂಡರ ಜತೆ ಮಾತುಕತೆ ನಡೆಸಿ ಅಂತಿಮವಾಗಿ ತೇರದಾಳದಿಂದ ಸ್ಪರ್ಧಿಸಲು ಸಜ್ಜಾಗಲಿದ್ದಾರೆ.



Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3273922
Today
Yesterday
This Week
Last Week
This Month
Last Month
All days
2443
6468
22765
3222209
98412
263209
3273922
Your IP: 54.158.55.5
2017-10-18 09:08