Breaking News

ಉಚಿತ ಲ್ಯಾಪ್ ಟಾಪ್ ವಿತರಣೆ ಮತ್ತು ವಿವೇಕಾನಂದರ ಜಯಂತ್ಯೋತ್ಸವ

Written by 
Published: 12 January 2018
58 times Last modified on Friday, 12 January 2018 16:05

ಕೆ.ಎನ್.ಪಿ.ವಾರ್ತೆ, ದಾವಣಗೆರೆ,ಜ.12;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಉಚಿತ ಲ್ಯಾಪ್ ಟಾಪ್ ವಿತರಣೆ ಮತ್ತು ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಗಳೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 2016-17 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮತ್ತು ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಶಾಸಕ ಹೆಚ್.ಪಿ.ರಾಜೇಶ್,  ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ 62 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ನೀರು, ಶೌಚಾಲಯ, ಕೊಠಡಿಗಳ ಸಮಸ್ಯೆಗಳ ಬಗ್ಗೆ  ಅಳಲನ್ನು ತೋಡಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಚುತ್ತಪ್ಪ , ಕಾಂಗ್ರೆಸ್ ಮುಖಂಡ ಗುರುಸಿದ್ದಪ್ಪ, ಆದರ್ಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಬಿ.ಕೆ. ಬಸವರಾಜ್, ಶಿಕ್ಷಕರಾದ ಶಾಂತವೀರಪ್ಪ , ಲಾಲ್ ಸಿಂಗ್ ನಾಯಕ್, ಮಲ್ಲಿಕಾರ್ಜುನ ಕಪ್ಪಿ , ಚೈತ್ರ, ಸಲ್ಮ ಬಾನು, ಲಕ್ಷ್ಮಿ , ಸೇರಿದಂತೆ ಇತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250597
Today
Yesterday
This Week
Last Week
This Month
Last Month
All days
10004
16742
76325
4062809
281692
395132
4250597
Your IP: 54.234.190.237
2018-01-18 16:04