Breaking News

ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವ ಮಾತೇ ಇಲ್ಲ : ಸಿಎಂ

Written by 
Published: 09 January 2018
22 times Last modified on Tuesday, 09 January 2018 16:06

ಕೆ.ಎನ್.ಪಿ.ವಾರ್ತೆ, ಮಡಿಕೇರಿ, ಜ.09;

ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಂದು ಮಡಿಕೇರಿ ನಗರದ ಗಾಲ್ಫ್ ‍ಮೈದಾನಕ್ಕೆ ಹೆಲಿಕಾಫ್ಟರ್ ನಲ್ಲಿ ಬಂದಿಳಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವ ಮಾತೇ ಇಲ್ಲ. ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನಗಳು ಬರುತ್ತಿವೆ. ಆದರೆ ಚಾಮುಂಡೇಶ್ವರಿ ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಕ್ಷೇತ್ರ ಹೀಗಾಗಿ ಅಲ್ಲಿಂದಲೇ ಸ್ಪರ್ಧಿಸುವುದಾಗಿ ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿದ್ದು ಐದು ಬಾರಿ ಗೆದ್ದಿದ್ದೇನೆ. ಹೀಗಾಗಿ ಅಲ್ಲಿನ ಜನರ ಬಗ್ಗೆ ನನಗೆ ವಿಶ್ವಾಸವಿದೆ. ಈಗಾಗಲೇ ಕ್ಷೇತ್ರ ಬದಲಾವಣೆ ಮಾಡುತ್ತೇನೆ ಎನ್ನುವುದು ಬರೀ ಊಹಾಪೋಹವಾಗಿದ್ದು, ಯಾರೋ ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಂತು ಸತ್ಯ. ಅದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಹೇಳಿದರು.

ಕೊಡಗಿನಲ್ಲಿರುವ ಕೆಲವು ಸಮಸ್ಯೆಗಳು ನನ್ನ ಅರಿವಿಗೆ ಬಂದಿದ್ದು, ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಕಾಂಗ್ರೆಸ್ ಗೆ ಬರುವುದು ಸಂತೋಷದ ವಿಚಾರವೇ ಈ ಕುರಿತು ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದರು.

ಕೃಪೆ : ಆನ್ ಲೈನ್

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250577
Today
Yesterday
This Week
Last Week
This Month
Last Month
All days
9984
16742
76305
4062809
281672
395132
4250577
Your IP: 54.234.190.237
2018-01-18 16:03