Breaking News

ಏಕಕಾಲಕ್ಕೆ ಬಳ್ಳಾರಿ, ಗದಗನಲ್ಲಿ ಎಸಿಬಿ ದಾಳಿ

Written by 
Published: 04 January 2018
56 times Last modified on Thursday, 04 January 2018 06:17

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜ.04;

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ಇಂದು ಬೆಳಗ್ಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ.

ಅದಾಯ ಮೀರಿದ ಆಸ್ತಿ ಗಳಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಗದಗ ಮತ್ತು ಬಳ್ಳಾರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಳ್ಳಾರಿಯ ಉಪ ವಿಭಾಗಾಧಿಕಾರಿ ಶಿವಕುಮಾರ್ ಮತ್ತು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಅಶೋಕ್ ಪಾಟೀಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಆದಾಯ ಮೀರಿ ಸಂಪತ್ತುಗಳಿಸಿರುವ ದೂರಿನ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಎಸಿಬಿ ಡಿ.ಎಸ್.ಪಿ. ಮಂಜುನಾಥ್ ಅವರ ನೇತೃತ್ವದಲ್ಲಿ ಬಳ್ಳಾರಿ ಮತ್ತು ಚಿತ್ರದುರ್ಗದ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಪರಿಶೀಲನೆ ಕಾರ್ಯ ಮುಂದುವರೆದಿದೆ. 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274356
Today
Yesterday
This Week
Last Week
This Month
Last Month
All days
791
15484
100084
4062809
305451
395132
4274356
Your IP: 54.167.126.106
2018-01-20 01:16