Breaking News

ಬಹುಕೋಟಿ ಮೇವು ಹಗರಣ : ಲಾಲುಗೆ ಜೈಲು

ಕೆ.ಎನ್.ಪಿ.ವಾರ್ತೆ,ರಾಂಚಿ,ಜ.06;

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ, ಲಾಲುಗೆ 3ವರ್ಷ, 6ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಬಹುಕೋಟಿ ಮೇವು ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಮೂರು ವರ್ಷ, ಆರು ತಿಂಗಳು ಜೈಲು ಹಾಗೂ 5 ಲಕ್ಷ ರೂ. ದಂಡ ವಿಧಿಸಿ, ರಾಂಚಿ ಸಿಬಿಐ ವಿಶೇಷ ಕೋರ್ಟ್ ಇಂದು ಆದೇಶ ಹೊರಡಿಸಿದೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಶಿವಪಾಲ್ ಸಿಂಗ್ ತೀರ್ಪು ನೀಡಿದ್ದಾರೆ.

ದೇವಘರ್ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ದೋಷಿ ಎಂದು ಡಿಸೆಂಬರ್ 23 ರಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ನೀಡಿತ್ತು. ಆದರೆ, ಶಿಕ್ಷೆ ಪ್ರಮಾಣವನ್ನು ಕೋರ್ಟ್ ಜನವರಿ 3ಕ್ಕೆ ಪ್ರಕಟಿಸಬೇಕಿತ್ತು, ಕಾರಣಾಂತರಗಳಿಂದ ಎರಡು ಬಾರಿ ಮುಂದೂಡಿ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ಮಾಹಿತಿಗಳ ಪ್ರಕಾರ, ಲಾಲೂ ಪರ ವಕೀಲ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250394
Today
Yesterday
This Week
Last Week
This Month
Last Month
All days
9801
16742
76122
4062809
281489
395132
4250394
Your IP: 54.234.190.237
2018-01-18 15:53