Breaking News

2ನೇ ಟೆಸ್ಟ್ : ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಕೆ.ಎನ್.ಪಿ.ವಾರ್ತೆ,ಸೆಂಚೂರಿಯನ್,ಜ.13;

ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಕೇಪ್ ಟೌನ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ತವಕದಲ್ಲಿದ್ದು, ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ 1-0 ಅಂತರದಿಂದ ಮುಂದಿದೆ. ಹಾಗಾಗಿ ಇಂದು ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಮೊದಲ ಪಂದ್ಯದ  ಗೆಲುವಿನ ಹುಮ್ಮಸ್ಸಿನಲ್ಲಿರುವ ದಕ್ಷಿಣ ಆಫ್ರಿಕಾ ಎರಡನೇ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಪ್ರಭುತ್ವ ಸಾಧಿಸಲು ಹವಣಿಸಿದೆ. ಹೀಗಾಗಿ ಮೊದಲ ಪಂದ್ಯದಂತೆ ಈ ಪಂದ್ಯವೂ ಕೂಡ ಕದನ ಕುತೂಹಲಕಾರಿಯಾಗಿದೆ. ಇನ್ನು ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಿಖರ್ ಧವನ ಸ್ಥಾನದಲ್ಲಿ ಕೆ.ಎಲ್.ರಾಹುಲ್, ಭುವನೇಶ್ವರ್ ಕುಮಾರ್ ಬದಲಿಗೆ ಇಶಾಂತ್ ಶರ್ಮಾ ಹಾಗೂ ವೃದ್ಧಿಮಾನ್ ಸಹಾ ಸ್ಥಾನದಲ್ಲಿ ಪಾರ್ಥಿವ್ ಪಟೇಲ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತು ದಕ್ಷಿಣ ಆಫ್ರಿಕಾ ತಂಡದಲ್ಲಿ ಡೇಲ್ ಸ್ಟೇನ್ ಸ್ಥಾನದಲ್ಲಿ ಲುಂಗಿ ಜಿಡಿ ಆಡಲಿದ್ದಾರೆ. 

ಸ್ಕೋರ್ :

36/0 (14.1 Ovs)

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250592
Today
Yesterday
This Week
Last Week
This Month
Last Month
All days
9999
16742
76320
4062809
281687
395132
4250592
Your IP: 54.234.190.237
2018-01-18 16:04