Breaking News

ಆದಾಯ ತೆರಿಗೆ ವಿನಾಯಿತಿ ಮಿತಿ ಏರಿಕೆ ಸಾಧ್ಯತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜ.10;

2018-19ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ಮಿತಿಯನ್ನು ಸರಕಾರವು 3 ಲಕ್ಷ ರೂ.ಗೆ ಏರಿಸುವ ಸಾಧ್ಯತೆ ಇದೆ.

ಕೇಂದ್ರದ ಎನ್‌ಡಿಎ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಫೆಬ್ರುವರಿ 1ರಂದು ಮಂಡಿಸಲಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿ ಏರಿಕೆ ಮತ್ತು ತೆರಿಗೆ ಹಂತಗಳಲ್ಲಿ ಬದಲಾವಣೆಯ ಬಗ್ಗೆ ಹಣಕಾಸು ಸಚಿವಾಲಯ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ, ಈಗಿರುವ 2.5 ಲಕ್ಷ ರೂ ವಾರ್ಷಿಕ ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ಗಳಿಗೆ ಏರಿಸುವ ಸಾಧ್ಯತೆಯಿದೆ. 5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಮಿತಿ ನೀಡಬೇಕು ಎಂಬ ಬೇಡಿಕೆ ಇದೆ. ಆದರೆ, ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250561
Today
Yesterday
This Week
Last Week
This Month
Last Month
All days
9968
16742
76289
4062809
281656
395132
4250561
Your IP: 54.234.190.237
2018-01-18 16:02