Breaking News

ಬಾಬ್ರಿಮಸೀದಿ ಧ್ವಂಸಕ್ಕೆ 25ವರ್ಷ : ದೇಶಾದ್ಯಂತ ಬಿಗಿಭದ್ರತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.06;

ಬಾಬ್ರಿ ಮಸೀದಿ ಧ್ವಂಸ ನಡೆದು ಇಂದಿಗೆ 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ದೇಶದೆಲ್ಲೆಡೆ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಲಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸಕ್ಕೆ ಇಂದಿಗೆ 25ವರ್ಷಗಳಾಗಿದ್ದು ಈ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಈ ದಿನವನ್ನು 'ಶೌರ್ಯ ದಿನ'ವನ್ನಾಗಿ ಆಚರಿಸುವಂತೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹಿಂದೂ-ಮುಸ್ಲಿಂ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ ಹಾಗೂ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಆದ್ದರಿಂದ ದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಸಂಘಟನೆಗಳು ಕರಾಳ ದಿನಾಚರಣೆ, ಸಂಭ್ರಮಾಚರಣೆ ನಡೆಸುವ ಸಾಧ್ಯತೆ ಇರುವುದರಿಂದ ಜಿಲ್ಲೆಯಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ. ಬಹಿರಂಗ ಸಭೆ, ಪ್ರತಿಭಟನೆ, ರ‍್ಯಾಲಿಗೆ ನಿರ್ಬಂಧ ವಿಧಿಸಲಾಗಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3770773
Today
Yesterday
This Week
Last Week
This Month
Last Month
All days
5945
14978
20923
3647859
197000
189062
3770773
Your IP: 54.221.76.68
2017-12-18 08:47