Breaking News

ಫೆ.10ರಿಂದ ರಾಜ್ಯದೆಲ್ಲೆಡೆ ಸಂಚಲಿಸಲಿರುವ ರಾಹುಲ್ ಗಾಂಧಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜ.13;

ರಾಹುಲ್ ಗಾಂಧಿಯವರು ಫೆಬ್ರವರಿ 10ರಿಂದ 3 ದಿನಗಳ ಕಾಲ ರಾಜ್ಯದೆಲ್ಲೆಡೆ ಸಂಚರಿಸಲಿದ್ದಾರೆ.

ದೆಹಲಿಯಲ್ಲಿ ಇಂದು ನಡೆದ ಎಐಸಿಸಿ ನಾಯಕರ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದ ಸಭೆಯಲ್ಲಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯ ರೂಪುರೇಷೆ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಮೊದಲು ಜನವರಿ 2 ಅಥವಾ ಮೂರನೇ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಂದೂಡಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರವಾಸವನ್ನು ಫೆಬ್ರವರಿ ಎರಡನೇ ವಾರದಂದು ಕೈಗೊಳ್ಳಲು ನಿರ್ಣಯಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಫೆಬ್ರವರಿ 10ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ 2018ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250600
Today
Yesterday
This Week
Last Week
This Month
Last Month
All days
10007
16742
76328
4062809
281695
395132
4250600
Your IP: 54.234.190.237
2018-01-18 16:04