Breaking News

ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

ಕೆ.ಎನ್.ಪಿ.ವಾರ್ತೆ,ನವದೆಹಲಿ, ಜ.06;

ಕೇಂದ್ರ ಬಜೆಟ್ ಮಂಡನೆಗೆ ದಿನ ನಿಗದಿಯಾಗಿದ್ದು, 2018ನೇ ಸಾಲಿನ ಕೇಂದ್ರ ಬಜೆಟ್‌ ಫೆಬ್ರವರಿ 1ರಂದು ಮಂಡನೆಯಾಗಲಿದೆ.

2018ನೇ ಸಾಲಿನ ಕೇಂದ್ರ ಬಜೆಟ್‌ ಫೆಬ್ರವರಿ 1ರಂದು, ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗುವ ಸಾಧ್ಯತೆಗಳಿವೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ. ಸಂಸತ್ತಿನ ಬಜೆಟ್‌ ಅಧಿವೇಶನ ಜನವರಿ 29ರಿಂದು ಆರಂಭವಾಗಲಿದ್ದು, ಏಪ್ರಿಲ್‌ 6ರವರೆಗೆ ನಡೆಯಲಿದೆ. ಅಧಿವೇಶನದ ಮೊದಲ ಹಂತ, ಜನವರಿ 29ರಿಂದ ಫೆಬ್ರವರಿ 9ರ ವರೆಗೆ ಮತ್ತು ಎರಡನೇ ಹಂತ, ಮಾರ್ಚ್‌ 5ರಿಂದ ಏಪ್ರಿಲ್‌ 6ರ ವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌ ತಿಳಿಸಿದರು.

ಫೆ.1ರಂದು ಮಂಡನೆಯಾಗಲಿರುವ ಬಜೆಟ್, ನರೇಂದ್ರ ಮೋದಿ ಸರಕಾರದ ನಾಲ್ಕನೇ ಬಜೆಟ್ ಮತ್ತು ಜಿಎಸ್‌ಟಿ ಜಾರಿಯಾದ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್‌ ಇದಾಗಿದೆ. ಕರ್ನಾಟಕ ಬಜೆಟ್ ನ್ನು ಇದೇ ಫೆಬ್ರವರಿ 16ರಂದು ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಅದಕ್ಕೂ ಮೊದಲು ಕೇಂದ್ರ ಸರಕಾರದ ಬಜೆಟ್ ಮಂಡನೆಯಾಗಲಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250466
Today
Yesterday
This Week
Last Week
This Month
Last Month
All days
9873
16742
76194
4062809
281561
395132
4250466
Your IP: 54.234.190.237
2018-01-18 15:56