Breaking News

ನಾಳೆ ಗುಜರಾತ್ ನಲ್ಲಿ 2ನೇ ಹಂತದ ಚುನಾವಣೆ

ಕೆ.ಎನ್.ಪಿ.ವಾರ್ತೆ,ಅಹಮದಾಬಾದ್, ಡಿ.13;

ನಾಳೆ ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆ ನಡೆಯಲಿದೆ.

ನಾಳೆ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಈ ಚುನಾವಣೆಯಲ್ಲಿ ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆ ನಾಳೆ ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ನಡೆಯಲಿದೆ. ಸುಗಮ ಮತ್ತು ಶಾಂತಿಯುತ ಮತದಾನಕ್ಕಾಗಿ ಬಿಗಿ ಭದ್ರತೆ ಮಾಡಲಾಗಿದೆ. 

25,550 ಮತಕೇಂದ್ರಗಳಲ್ಲಿ ಮತದಾನ ನಡೆಯಲಿದ್ದು, 28,144 ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಎರಡನೇ ಹಂತದ ಚುನಾವಣೆಯಲ್ಲಿ 2,22,96,867 ಮಂದಿ ಮತದಾನದ ಹಕ್ಕು ಪಡೆದಿದ್ದಾರೆ. ಇವರಲ್ಲಿ 1,15,47,435 ಪುರುಷರು ಮತ್ತು 1,07,48,997 ಮಹಿಳಾ ಮತದಾರರಿದ್ದಾರೆ. 

ಡಿ.9ರಂದು 89 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಶೇ.68ರಷ್ಟು ಮತದಾನವಾಗಿತ್ತು. ನಾಳೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿ.18ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250403
Today
Yesterday
This Week
Last Week
This Month
Last Month
All days
9810
16742
76131
4062809
281498
395132
4250403
Your IP: 54.234.190.237
2018-01-18 15:53