Breaking News

ರಾಷ್ಟ್ರಪತಿಗೆ ಹುಟ್ಟುಹಬ್ಬದ ಸಂಭ್ರಮ ಗಣ್ಯರಿಂದ ಶುಭಾಶಯ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.1;

ಭಾರತದ 14ನೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದು ಜನ್ಮದಿನದ ಸಂಭ್ರಮ.

ಈ ಮೂಲಕ ಕೋವಿಂದ್ 72ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಜುಲೈ 20ರಂದು ರಾಷ್ಟ್ರಪತಿಯಾಗಿ ಕೋವಿಂದ್ ಚುನಾಯಿತರಾಗಿದ್ದರು. ರೈತ ಕುಟುಂಬದಿಂದ ಬಂದ ಇವರು ತಮ್ಮದೇ ಆದ ವಿಶಿಷ್ಟ ವ್ಯಕ್ತಿತ್ವದಿಂದ ಇಂದು ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಕೋವಿಂದ್ ರಾಷ್ಟ್ರಪತಿ ಹುದ್ದೆಗೇರಿದ ದಲಿತ ಸಮುದಾಯದ ಎರಡನೇ ನಾಯಕರಾಗಿದ್ದಾರೆ.

 

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3273903
Today
Yesterday
This Week
Last Week
This Month
Last Month
All days
2424
6468
22746
3222209
98393
263209
3273903
Your IP: 54.158.55.5
2017-10-18 09:05